ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲನಾ ಸಿಬ್ಬಂದಿಗೆ ಹೆಚ್ಚುವರಿ ಕೆಲಸ

Last Updated 13 ಜೂನ್ 2020, 19:44 IST
ಅಕ್ಷರ ಗಾತ್ರ

ಬೆಂಗಳೂರು: ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಸಿಗದೆ ಘಟಕಗಳಲ್ಲೇ ಉಳಿಯುವ ಚಾಲಕ ಮತ್ತು ನಿರ್ವಾಹಕ ಸಿಬ್ಬಂದಿಯನ್ನು ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವ ಕೆಲಸಕ್ಕೆ ಬಿಎಂಟಿಸಿ ನಿಯೋಜಿಸಿದೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಿಗೆ ಇರುವ ಸಮಯ ಅಂದರೆ ಬೆಳಿಗ್ಗೆ 8ರಿಂದ 11 ಗಂಟೆ ತನಕ ಮತ್ತು ಸಂಜೆ 4.30ರಿಂದ 7.30ರ ತನಕ ಬಸ್ ನಿಲ್ದಾಣಗಳಲ್ಲಿ ನಿಂತಿರುವ ಪ್ರಯಾಣಿಕರಿಗೆ ಸಿಬ್ಬಂದಿ ಸಲಹೆ ನೀಡಬೇಕು.

‘ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಬಸ್ ಹತ್ತುವಂತೆ ನೋಡಿಕೊಳ್ಳಬೇಕು. ಮಾಸ್ಕ್ ಧರಿಸದ ಪ್ರಯಾಣಿಕರು ಬಸ್ ಹತ್ತದಂತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣಗಳಲ್ಲಿ ನಿಂತಾಗಲೂ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಬೇಕು’ ಎಂದು ಸಂಸ್ಥೆ ಸುತ್ತೋಲೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT