ಶನಿವಾರ, ಅಕ್ಟೋಬರ್ 19, 2019
22 °C

ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಲೌಡ್‌ಸ್ಪೀಕರ್‌ ಹಾಡುಗಳ ನಿಷೇಧ

Published:
Updated:

ಬೆಂಗಳೂರು : ಬೆಂಗಳೂರ ಮಹಾನಗರ ಸಾರಿಗೆ ಸಂಸ್ಥೆಗೆ(ಬಿಎಂಟಿಸಿ) ಸೇರಿದ ಎಲ್ಲಾ ಬಸ್ಸುಗಳಲ್ಲಿ ಮೊಬೈಲ್‌ ಲೌಡ್‌ಸ್ಪೀಕರ್‌ನಲ್ಲಿ ಹಾಡು ಹಾಕುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ, ಬಸ್‌ ಮತ್ತು ರೈಲುಗಳಲ್ಲಿ ಲೌಡ್‌ಸ್ಪೀಕರ್‌ ಬಳಕೆಯನ್ನು ನಿಷೇಧಿಸಬೇಕು ಎಂದು ತುಮಕೂರಿನ ವಕೀಲರೊಬ್ಬರು ಹೈಕೋರ್ಟಿನಲ್ಲಿ ಪಿಐಎಲ್‌ ಸಲ್ಲಿಸಿದ್ದರು. ಇದರ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಕ್ರಮ ಕೈಗೊಂಡಿದೆ.

ಈ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಲು ಬಸ್‌ಗಳಲ್ಲಿ ಭಿತ್ತಿ ಪತ್ರಗಳನ್ನು ಅಳವಡಿಸಲಾಗುವುದು ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.


 

Post Comments (+)