ಮಂಗಳವಾರ, ಏಪ್ರಿಲ್ 20, 2021
24 °C

ಬಿಎಂಟಿಸಿ ಬಸ್ ಡಿಕ್ಕಿ ಯುವ ಉದ್ಯೋಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೈಟ್ ಫೀಲ್ಡ್: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಫಲ್ ಆಯಿಲ್ ಕಂಪನಿ ಬಳಿ ಮೃತಪಟ್ಟಿದ್ದಾನೆ.

ವಿಜ್ಞಾಸಾಗರ್ (24) ಮೃತಪಟ್ಟವ. ಬಳ್ಳಾರಿ ಮೂಲದ ವಿಜ್ಞಾಸಾಗರ್ ಸ್ನೇಹಿತರೊಂದಿಗೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಟ್ಟಣದಲ್ಲಿ ವಾಸವಾಗಿದ್ದು, ವೈಟ್ ಫೀಲ್ಡ್ ನ ಮೆಕಾಲೆ ಸೇಲ್ಸ್ ಅಂಡ್ ಸರ್ವೀಸ್ ಕಂಪನಿಯಲ್ಲಿ ಮೆಕಾನಿಕ್ ಕೆಲಸ ಮಾಡುತ್ತಿದ್ದ.

ಗುರುವಾರ ಬೆಳಿಗ್ಗೆ 8.30ರ ಸುಮಾರಿಗೆ ಹೊಸಕೋಟೆಯಿಂದ ತನ್ನ ಬೈಕ್‌ನಲ್ಲಿ ಕೆಲಸಕ್ಕೆ ಬರುವಾಗ ಕಾಡುಗೋಡಿಯಿಂದ ವೈಟ್ ಫೀಲ್ಡ್ ರಸ್ತೆಯಲ್ಲಿ ಸಂಚರಿಸುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಕೆಳಗೆ ಬಿದ್ದ ಬೈಕ್ ಸವಾರನ ತಲೆಯ ಮೇಲೆ ಬಸ್‌ ಹಿಂಬದಿ ಚಕ್ರ ಹರಿದುದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಬಸ್ ಚಾಲಕನ್ನು ವಶಕ್ಕೆ ಪಡೆಯಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು