ಗುರುವಾರ , ಆಗಸ್ಟ್ 18, 2022
25 °C

ಬಿಎಂಟಿಸಿ ಬಸ್‌ ಹರಿದು ಪಾದಚಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದ ನಿರ್ಗಮನ ಗೇಟ್‌ ಬಳಿ ಬಸ್‌ ಹರಿದು ಪಿ.ಕೃಷ್ಣಮೂರ್ತಿ (45) ಎಂಬುವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಉತ್ತರಹಳ್ಳಿ ಮುಖ್ಯ ರಸ್ತೆಯ ಚಿಕ್ಕಲಸಂದ್ರ ನಿವಾಸಿಯಾಗಿರುವ ಕೃಷ್ಣಮೂರ್ತಿ ಅವರು ಖಾಸಗಿ ವಾಹನವೊಂದರ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಬಿಎಂಟಿಸಿ ಬಸ್‌ ನಿಲ್ದಾಣದ ಮೂರನೇ ನಿರ್ಗಮನ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿಲ್ದಾಣದ ಒಳಭಾಗದಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್‌ (ಕೆಎ 57, ಎಫ್ 4273) ಕೃಷ್ಣಮೂರ್ತಿಯವರಿಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು