ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್ ಚಕ್ರ ಹರಿದು ಗುತ್ತಿಗೆದಾರ ಸಾವು

Published 5 ಅಕ್ಟೋಬರ್ 2023, 16:18 IST
Last Updated 5 ಅಕ್ಟೋಬರ್ 2023, 16:18 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಬುಧವಾರ (ಅ. 4) ಸಂಜೆ ಅಪಘಾತ ಸಂಭವಿಸಿದ್ದು, ಸವಾರ ಭರತ್ ರೆಡ್ಡಿ (24) ಅವರು ಮೃತಪಟ್ಟಿದ್ದಾರೆ.

‘ಮತ್ತಿಕೆರೆ ನಿವಾಸಿ ಭರತ್ ರೆಡ್ಡಿ, ಸಿವಿಲ್ ಗುತ್ತಿಗೆದಾರ. ಕೆಲಸ ನಿಮಿತ್ತ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದರು.

‘ಭರತ್‌ ಅವರು ಅಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದಾರೆ. ಅದರ ಪರಿಶೀಲನೆಗೆಂದು ಬೈಕ್‌ನಲ್ಲಿ ತೆರಳುತ್ತಿದ್ದರು. ಅಟ್ಟೂರು ಮದರ್ ಡೇರಿ ಬಳಿ ಬಿಎಂಟಿಸಿ ಬಸ್‌ ಹೊರಟಿತ್ತು. ಚಾಲಕ, ಅತೀ ವೇಗದಲ್ಲಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ. ಇದರಿಂದಾಗಿ, ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿತ್ತು’ ಎಂದು ಹೇಳಿದರು.

‘ಅಪಘಾತದಿಂದಾಗಿ ಬೈಕ್ ಉರುಳಿಬಿದ್ದಿತ್ತು. ರಸ್ತೆಗೆ ಬಿದ್ದಿದ್ದ ಭರತ್ ಅವರ ಮೈ ಮೇಲೆಯೇ ಬಸ್ಸಿನ ಚಕ್ರಗಳು ಹರಿದಿದ್ದವು. ತೀವ್ರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟರು. ಬಿಎಂಟಿಸಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT