ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್‌ ಡಿಕ್ಕಿ: ಬೈಕ್ ಸವಾರ ಸಾವು

Published 5 ಜನವರಿ 2024, 21:39 IST
Last Updated 5 ಜನವರಿ 2024, 21:39 IST
ಅಕ್ಷರ ಗಾತ್ರ

ಬೆಂಗಳೂರು: ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯ ಸ್ಪೈಸ್ ಗಾರ್ಡನ್ ಬಳಿ, ಶುಕ್ರವಾರ ಬೆಳಿಗ್ಗೆ ಬಿಎಂಟಿಸಿ ವೋಲ್ವೊ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ.

ಎಳಂಗೋವನ್ ಸೆಂಕತ್ತವಲ್ (43) ಮೃತಪಟ್ಟ ಸವಾರ.

‘ಶುಕ್ರವಾರ ಬೆಳಿಗ್ಗೆ 9.45ರ ಸುಮಾರಿಗೆ ಎಳಂಗೋವನ್ ಅವರು ಬೈಕ್‌ನಲ್ಲಿ ವರ್ತೂರು ಮುಖ್ಯರಸ್ತೆಯ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳಂದೂರಿನಲ್ಲಿರುವ ತಮ್ಮ ಕಚೇರಿಗೆ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೋಲ್ವೊ ಬಸ್‌, ಬೈಕ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸವಾರನ ತಲೆ ಹಾಗೂ ಮುಖಕ್ಕೆ ಬಲವಾದ ಗಾಯವಾಗಿತ್ತು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಮಾಲತಿ ಪಿ. ಅವರು ದೂರು ನೀಡಿದ್ದು, ಬಸ್ ಚಾಲಕ ಅಮರೇಶ ಬಸವಂತಪ್ಪ ವಿರುದ್ಧ ಎಚ್‌ಎಎಲ್‌ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT