ಶನಿವಾರ, ಮೇ 8, 2021
26 °C

ಬಿಎಂಟಿಸಿ ಬಸ್ಸಿಗೆ ಕಲ್ಲು: ಚಾಲಕನ ತಲೆಗೆ ಪೆಟ್ಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಚಾಲಕ ನಂಜುಂಡೇಗೌಡ (43) ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

‘ಕಾಮಾಕ್ಷಿಪಾಳ್ಯದ ವಿಘ್ನೇಶ್ವರ್ ನಗರದ ಬಸ್‌ ತಂಗುದಾಣ ಬಳಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ನಂಜುಂಡೇಗೌಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ಸಿಟಿ ಮಾರುಕಟ್ಟೆಯಿಂದ ಜಾಲಹಳ್ಳಿ ಕಡೆಗೆ (ನಂ. 248/6) ಬಿಎಂಟಿಸಿ ಬಸ್ ಹೊರಟಿತ್ತು. ಇದೇ ಸಂದರ್ಭದಲ್ಲೇ ಮೂವರು ದುಷ್ಕರ್ಮಿಗಳು, ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಹೊಡೆದಿದ್ದಾರೆ. ಒಂದು ಕಲ್ಲು ಚಾಲಕನ ತಲೆಗೆ ಬಿದ್ದಿದೆ’ ಎಂದೂ ತಿಳಿಸಿದರು.

‘ಕಲ್ಲು ತೂರಾಟದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು