ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬ್ರೇಕ್‌ ವಿಫಲಗೊಂಡು ರಸ್ತೆ ವಿಭಜಕಕ್ಕೆ ಬಿಎಂಟಿಸಿ ಬಸ್‌ ಡಿಕ್ಕಿ

Published 4 ಅಕ್ಟೋಬರ್ 2023, 14:14 IST
Last Updated 4 ಅಕ್ಟೋಬರ್ 2023, 14:14 IST
ಅಕ್ಷರ ಗಾತ್ರ

ಬೆಂಗಳೂರು: ಕೃಷ್ಣರಾಜ ಮಾರುಕಟ್ಟೆಯ ಮೇಲ್ಸೇತುವೆಯಲ್ಲಿ ಬ್ರೇಕ್‌ ವಿಫಲಗೊಂಡು ರಸ್ತೆ ವಿಭಜಕಕ್ಕೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ಧಾರೆ. ಬಸ್‌ನಲ್ಲಿ ಪ್ರಯಾಣಿಕರು ಇರಲಿಲ್ಲ.

ಕೆ.ಆರ್.ಮಾರುಕಟ್ಟೆಯಿಂದ ಚಾಮರಾಜಪೇಟೆಗೆ ಬಸ್‌ ತೆರಳುತ್ತಿತ್ತು. ಬೆಳಿಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ ಡಿಕ್ಕಿಯಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಸ್ಥಳಕ್ಕೆ ಬಂದ ಚಿಕ್ಕಪೇಟೆ ಸಂಚಾರ ಪೊಲೀಸರು ಬಸ್‌ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT