ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಕಿ: ಬಿಎಂಟಿಸಿ ಬಸ್‌ ಭಸ್ಮ

Published 9 ಜುಲೈ 2024, 19:43 IST
Last Updated 9 ಜುಲೈ 2024, 19:43 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಎಂ.ಜಿ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಬಿಎಂಟಿಸಿ ಬಸ್‌ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ.  ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ರೋಸ್‌ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ 144–ಇ ಸಂಖ್ಯೆ ಬಸ್‌ ತೆರಳುತ್ತಿತ್ತು. ಮಾರ್ಗ ಮಧ್ಯೆ ಅನಿಲ್ ಕುಂಬ್ಳೆ ವೃತ್ತದ ಬಳಿ ಎಂಜಿನ್‌ನಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್‌ನಲ್ಲಿದ್ದ ಸುಮಾರು 20 ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬಸ್‌ನಲ್ಲಿದ್ದ ಅಗ್ನಿ ನಂದಕ ಉಪಕರಣ ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತು. 

ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬಸ್‌ ಸಂಪೂರ್ಣ ಸುಟ್ಟು ಹೋಗಿದೆ. 

ಈ ಘಟನೆಯಿಂದಾಗಿ ಅನಿಲ್ ಕುಂಬ್ಳೆ ವೃತ್ತದ ಬಳಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ವಾಹನವನ್ನು ಶಾಂತಿನಗರದ ಬಿಎಂಟಿಸಿ ಕೇಂದ್ರ ವರ್ಕ್‌ಶಾಪ್‌ಗೆ ಕೊಂಡೊಯ್ಯಲಾಯಿತು.

‘ಎಂಜಿನಿಯರ್‌ಗಳ ತಂಡವು ಅವಘಡಕ್ಕೆ ಕಾರಣವನ್ನು ಪರಿಶೀಲಿಸುತ್ತಿದೆ. ಪ್ರತಿ ವರ್ಷ ಬಸ್‌ಗಳಿಗೆ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಫಿಟ್ ನೆಸ್ ಪ್ರಮಾಣಪತ್ರ ಪಡೆಯುತ್ತೇವೆ' ಎಂದು ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT