ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಬ್ಬಾಳ ಬಳಿ ನಿಯಂತ್ರಣ ತಪ್ಪಿ ಬೈಕ್‌, ಕಾರಿಗೆ BMTC ಬಸ್‌ ಡಿಕ್ಕಿ:ಚಾಲಕ ಅಮಾನತು

ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ, ಬಿಎಂಟಿಸಿ ವೋಲ್ವೊ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಎದುರು ಚಲಿಸುತ್ತಿದ್ದ ಬೈಕ್‌ ಹಾಗೂ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ.
Published : 13 ಆಗಸ್ಟ್ 2024, 12:45 IST
Last Updated : 13 ಆಗಸ್ಟ್ 2024, 12:45 IST
ಫಾಲೋ ಮಾಡಿ
Comments

ಬೆಂಗಳೂರು: ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ, ಬಿಎಂಟಿಸಿ ವೋಲ್ವೊ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಎದುರು ಚಲಿಸುತ್ತಿದ್ದ ಬೈಕ್‌ ಹಾಗೂ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ.

ಸೋಮವಾರ ಬೆಳಿಗ್ಗೆ 9.30ರ ಸುಮಾರಿಗೆ ಸಂಭವಿಸಿದ ಅಪಘಾತ ದೃಶ್ಯ ಬಸ್​ನ ಸಿಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ದ್ವಿಚಕ್ರ ವಾಹನ ಸವಾರನ ಕಾಲಿಗೆ ಗಾಯವಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್ಎಸ್ಆರ್ ಲೇಔಟ್‌ಗೆ ಬಸ್‌ ಚಲಿಸುತ್ತಿತ್ತು. ಆಗ ಅಪಘಾತವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಕರಣ ಸಂಬಂಧ ಚಾಲಕ ರಾಜಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT