ಬುಧವಾರ, ಏಪ್ರಿಲ್ 8, 2020
19 °C
ಚಿಕ್ಕಜಾಲ, ಎಚ್‌ಎಸ್‌ಆರ್‌ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ

ಬಿಎಂಟಿಸಿ ಬಸ್‌ ಹರಿದು ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಎಸ್‌ಆರ್‌ ಲೇಔಟ್ ಹಾಗೂ ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಅಪಘಾತಗಳು ಸಂಭವಿಸಿದ್ದು, ಸಾಫ್ಟ್‌ವೇರ್‌ ಕಂಪನಿ ಉದ್ಯೋಗಿ ಸೇರಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

ಇಬ್ಬಲೂರು ಜಂಕ್ಷನ್‌ ಬಳಿ ಬಿಎಂಟಿಸಿ ವೋಲ್ವೊ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ವಿಷ್ಣುತೀರ್ಥ (31) ಎಂಬುವರು ಮೃತಪಟ್ಟಿದ್ದಾರೆ.

‘ಸಾಫ್ಟ್‌ವೇರ್‌ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಉದ್ಯೋಗಿ ಆಗಿದ್ದ ವಿಷ್ಣುತೀರ್ಥ, ಸ್ನೇಹಿತ ಸಾಯಿಕೃಷ್ಣ (26) ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಗಾಯಗೊಂಡಿರುವ ಸಾಯಿಕೃಷ್ಣ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಎಚ್‌ಎಸ್‌ಆರ್‌ ಲೇಔಟ್ ಸಂಚಾರ ಪೊಲೀಸರು ಹೇಳಿದರು.

ಎಂಜಿನಿಯರ್ ಸಾವು: ಬಿ.ಬಿ.ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಗುದ್ದಿದ್ದರಿಂದಾಗಿ ಸವಾರ ಹರೀಶ್‌ಬಾಬು (32) ಎಂಬುವರು ಮೃತಪಟ್ಟಿದ್ದಾರೆ. ದೇವನಹಳ್ಳಿ ನಿವಾಸಿ ಹರೀಶ್‌ಬಾಬು, ಸಾಫ್ಟ್‌ವೇರ್ ಎಂಜಿನಿಯರ್. ಚಾಲಕ ಪರಾರಿಯಾಗಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು