ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಬಿಎಂಟಿಸಿ ಬಸ್‌ ಸಂಚಾರ

Last Updated 22 ಜುಲೈ 2020, 9:27 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ತೆರವಾದ ಕಾರಣ ಬುಧವಾರದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ.

ಲಾಕ್‌ಡೌನ್ ಜಾರಿಯಾದ ದಿನದಿಂದ ಅಂದರೆ ಜು.14ರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಬಸ್‌ಗಳ ಸಂಚಾರವನ್ನು ಕೆಎಸ್‌ಆರ್‌ಟಿಸಿ ಸ್ಥಗಿತಗೊಳಿಸಿತ್ತು.

‘ಅಗತ್ಯ ಸೇವೆ ಹೊರತುಪಡಿಸಿ ಬಿಎಂಟಿಸಿಯ ಬೇರೆ ಬಸ್‌ಗಳ ಕಾರ್ಯಾಚರಣೆ ಇರಲಿಲ್ಲ. ನಗರದ ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ಬಿಎಂಟಿಸಿ ಬಸ್‌ಗಳ ಸಂಚಾರ ಬೆಳಿಗ್ಗೆ 6ರಿಂದಲೇ ಆರಂಭವಾಗಲಿದೆ. 1,500 ಬಸ್‌ಗಳು ರಸ್ತೆಗೆ ಇಳಿಯಲಿದ್ದು, ರಾತ್ರಿ 8ರ ತನಕ ಕಾರ್ಯಾಚರಣೆ ಇರಲಿದೆ. ಮಾಸ್ಕ್ ಧರಿಸದವರಿಗೆ ಪ್ರಯಾಣಕ್ಕೆ ಅವಕಾಶ ಇಲ್ಲ’ ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT