ಮಂಗಳವಾರ, ಮಾರ್ಚ್ 31, 2020
19 °C

22 ವಿಶೇಷ ಮಾರ್ಗದಲ್ಲಿ ಬಿಎಂಟಿಸಿ ಬಸ್‌ ಸಂಚಾರ

‍ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಗತ್ಯ ಸೇವೆ ಒದಗಿಸುತ್ತಿರುವ ಸಿಬ್ಬಂದಿ ಮತ್ತು ಆಸ್ಪತ್ರೆಗಳಿಗೆ ತೆರಳಬೇಕಿರುವ ರೋಗಿಗಳ ಅನುಕೂಲಕ್ಕಾಗಿ ಗುರುವಾರ 22 ವಿಶೇಷ ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ಇರಲಿದೆ.

ಆಸ್ಪತ್ರೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ವೈದ್ಯಕೀಯ ಸಿಬ್ಬಂದಿ, ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ, ಇತರೆ ಅಗತ್ಯ ಸೇವೆ ಒದಗಿಸುವ (ಬೆಸ್ಕಾಂ, ಜಲಮಂಡಳಿ, ಬಿಬಿಎಂಪಿ, ಮೆಟ್ರೊ ರೈಲು) ಸಿಬ್ಬಂದಿ, ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ತೆರಳುವ ರೋಗಿಗಳ ಅನುಕೂಲಕ್ಕಾಗಿ ಈ ಸೇವೆ ಒದಗಿಸಲಾಗುತ್ತಿದೆ. ಸಾಮಾನ್ಯ ಜನರು ಈ ಬಸ್‌ಗಳಲ್ಲಿ ಪ್ರಯಾಣ ಮಾಡಲು ಅವಕಾಶ ಇಲ್ಲ.

‘ಕೆಂಪೇಗೌಡ ಬಸ್ ನಿಲ್ದಾಣದಿಂದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆ, ಜಿ.ಪಿ.ನಗರದ ಸುಪ್ರ ಆಸ್ಪತ್ರೆ, ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆ, ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ, ಅಂಬೇಡ್ಕರ್ ವೈದ್ಯಕೀಯ ಆಸ್ಪತ್ರೆ, ನೆಲಮಂಗಲ ಸರ್ಕಾರಿ ಆಸ್ಪತ್ರೆ, ವೈದೇಹಿ ಆಸ್ಪತ್ರೆ, ಶಾಂತಿನಗರ, ಬನಶಂಕರಿ ಸೇರಿ 22 ಮಾರ್ಗಗಳಲ್ಲಿ ಬಸ್ ಸಂಚಾರ ಇರಲಿದೆ. ಮಂಗಳವಾರ ಕೂಡ 12 ವಿಶೇಷ ಮಾರ್ಗಗಳಲ್ಲಿ ಬಸ್ ಸಂಚಾರ ಇತ್ತು’ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು