ಮಂಗಳವಾರ, ಆಗಸ್ಟ್ 9, 2022
23 °C

ಬಿಎಂಟಿಸಿ: ಸಂಚಾರ ವ್ಯತ್ಯಯ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡೀಸೆಲ್ ಕೊರತೆಯ ಕಾರಣಕ್ಕೆ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ತಿಳಿಸಿದರು.

‘ಸಗಟು ಖರೀದಿ ದರ ಪ್ರತಿ ಲೀಟರ್‌ ಡೀಸೆಲ್‌ಗೆ ₹119 ಇದ್ದರೆ, ಚಿಲ್ಲರೆ ವ್ಯಾಪಾರದಲ್ಲಿ ಡೀಸೆಲ್ ದರ ಲೀಟರ್‌ಗೆ ₹87 ಇದೆ. ₹30 ವ್ಯತ್ಯಾಸ ಇರುವುದರಿಂದ ಚಿಲ್ಲರೆ ವ್ಯಾಪಾರದಿಂದಲೇ ಡೀಸೆಲ್ ಖರೀದಿಸುತ್ತಿದ್ದೇವೆ’ ಎಂದು ಹೇಳಿದರು. 

‘ಇದಕ್ಕೂ ಅಡ್ಡಿಪಡಿಸುವ ಪ್ರಯತ್ನ ನಡೆದಿದೆ. ಹಲವು ಡಿಪೋಗಳಲ್ಲಿ ಇನ್ನೂ ಮೂರು ದಿನಕ್ಕೆ ಸಾಕಾಗುವಷ್ಟು ಡೀಸೆಲ್ ದಾಸ್ತಾನಿದೆ. ಇಲ್ಲದಿರುವ ಕಡೆ ಪೆಟ್ರೋಲ್ ಬಂಕ್‌ಗಳಿಗೆ ಹೋಗಿ ಡೀಸೆಲ್ ತುಂಬಿಸಲಾಗುತ್ತಿದೆ. ಸಂಚಾರ ದಟ್ಟಣೆ ಆಗದಂತೆ ನಿಗಾ ವಹಿಸಲಾಗಿದೆ. ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು