ಗುರುವಾರ , ಸೆಪ್ಟೆಂಬರ್ 23, 2021
27 °C
ಲಾಕ್‌ಡೌನ್‌: ಸಾರ್ವಜನಿಕರ ಸಂಚಾರ ನಿರ್ಬಂಧ

ಬಿಎಂಟಿಸಿ: 134 ಅಗತ್ಯ ಸಾರಿಗೆ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ನಿತ್ಯ ಕಂಟೈನ್ಮೆಂಟ್‌ ‍ಪ್ರದೇಶಗಳನ್ನು ಹೊರತುಪಡಿಸಿ 134 ಅಗತ್ಯ ಬಸ್‌ಗಳ ಕಾರ್ಯಾಚರಣೆ ನಡೆಸಲಾಗುತ್ತದೆ. ಈ ಬಸ್‌ಗಳು ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಸಂಚಾರ ನಡೆಸಲಿವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು, ಪೊಲೀಸ್‌, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ನೌಕರರು, ಪತ್ರಕರ್ತರು, ಬ್ಯಾಂಕ್‌ ನೌಕರರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ರೈಲು ಹಾಗೂ ವಿಮಾನ ಪ್ರಯಾಣಿಕರು (ಟಿಕೆಟ್‌ ಹೊಂದಿರಬೇಕು) ಸಂಚಾರ ಮಾಡಬಹುದು.

ಈ ಪ್ರಯಾಣಿಕರು ಮಾಸಿಕ/ವಾರದ/ತಿಂಗಳ ಪಾಸ್‌ ಪಡೆದು ಸಂಚರಿಸಬಹುದು. ಮುಖಗವಸು ಧರಿಸದವರು ಪ್ರಯಾಣ ಮಾಡುವಂತಿಲ್ಲ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು