ಬೆಂಗಳೂರು: ಬಸ್ ಅಪಘಾತಗಳು ಹೆಚ್ಚಾಗುತ್ತಿರುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದೆ. ಮೊದಲ ಬಾರಿ ಅಪಘಾತವಾದರೆ ಚಾಲಕ ಅಮಾನತು, ಎರಡನೇ ಬಾರಿ ಅಪಘಾತ ಮಾಡಿದರೆ ಕೆಲಸದಿಂದ ವಜಾ ಮಾಡಲು ನಿರ್ಧರಿಸಲಾಗಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ಅವರ ಅಧ್ಯಕ್ಷತೆಯಲ್ಲಿ ನಡೆದ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು, ವಿಭಾಗೀಯ ತಾಂತ್ರಿಕ ಎಂಜಿನಿಯರ್ಗಳು, ಎಲ್ಲ ಘಟಕಗಳ ವ್ಯವಸ್ಥಾಪಕರ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಆಗಸ್ಟ್ನಲ್ಲಿ ನಾಲ್ಕು ಮಾರಣಾಂತಿಕ ಅಪಘಾತಗಳಾಗಿದ್ದು, ಅದರಲ್ಲಿ ಒಂದು ವಿದ್ಯುತ್ ಚಾಲಿತ ಬಸ್ಗೆ ಸಂಬಂಧಿಸಿದ್ದಾಗಿದೆ. ಮೂರು ಅಪಘಾತದಲ್ಲಿ ಬಿಎಂಟಿಸಿ ಚಾಲಕರಿಂದ ತಪ್ಪಾಗಿರಲಿಲ್ಲ. ವಿದ್ಯುತ್ ಚಾಲಿತ ಬಸ್ ಅಪಘಾತ ಮಾತ್ರ ಚಾಲಕರ ನಿರ್ವಹಣಾ ತಪ್ಪಿನಿಂದಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ, ದ್ವಿಚಕ್ರ ವಾಹನ ಸವಾರರು ಬಸ್ಗಳನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತಗಳಾಗುತ್ತಿವೆ ಎಂದು ಅಧಿಕಾರಿಗಳು ವಿವರ ನೀಡಿದರು.

ಚಾಲಕರಿಗೆ ತರಬೇತಿ ನೀಡಲಾಗಿದೆ. ಘಟಕಗಳಲ್ಲಿ ‘ಬದುಕು ಬದುಕಿಸು’ ಹಾಗೂ ಬಸ್ ನಿಲ್ದಾಣಗಳಲ್ಲಿ ‘ಬಸ್ ಬಂತು ಬಸ್’ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸಲಾಗಿದೆ. ಚಾಲಕರ ಒತ್ತಡ ಕಡಿಮೆ ಮಾಡಲು 2,000 ಟ್ರಿಪ್ಗಳ ಸಮಯ ಪರಿಷ್ಕರಣೆ ಮಾಡಿ ರನ್ನಿಂಗ್ ಟೈಮ್ ಹೆಚ್ಚಿಸಲಾಗಿದೆ. ಅಪಘಾತ ರಹಿತ ಚಾಲನೆ ಮಾಡಿದವರಿಗೆ ಚಿನ್ನ, ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶಿಸ್ತು ಕ್ರಮಗಳು

ಕರ್ತವ್ಯದ ವೇಳೆ ಮೊಬೈಲ್ ಬಳಕೆ ಮಾಡುವ ಚಾಲಕರಿಗೆ 15 ದಿನ ಅಮಾನತು ಮತ್ತು ವರ್ಗಾವಣೆ. ಮದ್ಯಪಾನ ತಪಾಸಣೆ ನಡೆಸಿದಾಗ ಮದ್ಯ ಸೇವಿಸಿರುವುದು ದೃಢಪಟ್ಟರೆ ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ. ಪ್ರಭಾಕರ ರೆಡ್ಡಿ ತಿಳಿಸಿದ್ದಾರೆ. ಮೊದಲ ಮಾರಣಾಂತಿಕ ಅಪಘಾತಕ್ಕೆ ಅಮಾನತ್ತು ಹಾಗೂ ಸೇವೆಯಿಂದ ವಜಾ ಮಾಡುವ ಶಿಸ್ತಿನ ಕ್ರಮವನ್ನು ಸಂಸ್ಥೆ ಅಳವಡಿಸಿಕೊಂಡಿದೆ. ಒಂದು ವರ್ಷದಲ್ಲಿ ನಡೆದ 20 ಮಾರಣಾಂತಿಕ ಅಪಘಾತ ಪ್ರಕರಣಗಳಲ್ಲಿ 20 ಚಾಲಕರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಪಘಾತ ನಡೆಸುವ ದುರ್ವರ್ತನೆ ತೋರುವ ಚಾಲಕರಿಗೆ ವಡ್ಡರಹಳ್ಳಿ ತರಬೇತಿ ಕೇಂದ್ರದಲ್ಲಿ ವಿಶೇಷ ತರಬೇತಿ ಕಡ್ಡಾಯಗೊಳಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರ ನಿರ್ದೇಶನದಂತೆ ಎಲ್ಲ ಘಟಕಗಳಲ್ಲಿ ಬೆಳಿಗ್ಗೆ 5 ಗಂಟೆಗೆ ಸಭೆ ನಡೆಸಿ ಚಾಲಕರಿಗೆ ಸುರಕ್ಷಾ ಚಾಲನೆ ಹಾಗೂ ನಿಯಮ ಪಾಲನೆಯ ಕುರಿತು ನಿತ್ಯ ಸೂಚನೆ ನೀಡಬೇಕು. ವಲಯವಾರು ವಾರದಲ್ಲಿ ಕನಿಷ್ಠ ಎರಡು ಬಾರಿ ಚಾಲನಾ ತರಬೇತಿ ನೀಡಬೇಕು ಎಂದು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.