ಬುಧವಾರ, ಜನವರಿ 19, 2022
18 °C

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ‘ಸಹಾಯ ಹಸ್ತ’ ಪಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ‘ಸಹಾಯ ಹಸ್ತ’ ಬಸ್ ಪಾಸ್‌ಗಳನ್ನು ನಗರದ 20 ಕಡೆ ವಿತರಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ವೈಟ್‌ಫೀಲ್ಡ್‌ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಬನಶಂಕರಿ, ಜಯನಗರ, ದೊಮ್ಮಲೂರು, ಕೋರಮಂಗಲ, ಕೆಂಗೇರಿ, ಯಲಹಂಕ, ಹೊಸಕೋಟೆ, ಸುಮ್ಮನಹಳ್ಳಿ ಡಿಪೊ, ಕೆ.ಆರ್.ಪುರ ಡಿಪೊ, ಎಚ್‌ಎಸ್‌ಆರ್‌ ಲೇಔಟ್ ಡಿಪೊ, ಹೆಬ್ಬಾಳ ಡಿಪೊ, ನೆಲಮಂಗಲ ಡಿಪೊ, ಬಗಲಗುಂಟೆಯ ಕಾರ್ಮಿಕ ಇಲಾಖೆ ಕಚೇರಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕೇಂದ್ರ ಕಚೇರಿಯಲ್ಲಿ ಪಾಸ್‌ಗಳನ್ನು ವಿತರಿಸಲಾಗುವುದು.

ಗುರುತಿನ ಚೀಟಿ, ಆಧಾರ್ ಕಾರ್ಡ್, ಭಾವಚಿತ್ರಗಳ ಸಹಿತ ದಾಖಲೆಗಳನ್ನು ಸಲ್ಲಿಸಿ ಪಾಸ್ ಪಡೆಯಬಹುದು ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು