ಶನಿವಾರ, ಜನವರಿ 25, 2020
18 °C

ಪ್ರಯಾಣ ದರ ಇಳಿಕೆ: ಬಿಎಂಟಿಸಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಸ್‌ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವೇ ಎಂಬುದರ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್ ಪ್ರಯಾಣದರ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ನಗರದಲ್ಲಿ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಸರ್ಕಾರದ ಉದ್ದೇಶ.

‘ಬಿಎಂಟಿಸಿ ಬಸ್ ಸಂಚರಿಸುತ್ತಿರುವ ಎಲ್ಲಾ ಮಾರ್ಗಗಳ ದರದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕೆಲಸ ಮುಗಿದ ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಲಾಗುವುದು. ಸದ್ಯ ಕಡಿಮೆ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು