ಭಾನುವಾರ, ಮೇ 29, 2022
20 °C

ಬಿಎಂಟಿಸಿ ಬಸ್, ಮೆಟ್ರೊ ರೈಲು ಎಂದಿನಂತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾರಾಂತ್ಯದ ಕರ್ಪ್ಯು ರದ್ದುಗೊಳಿಸಿರುವುದರಿಂದ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇರಲಿವೆ.

ವಾರಾಂತ್ಯದ ಕರ್ಫ್ಯೂ ದಿನಗಳಲ್ಲಿ ಬಿಎಂಟಿಸಿ ಬಸ್‌ಗಳನ್ನು ಅಗತ್ಯ ಸೇವೆಗಳನ್ನು ಒದಗಿಸುವ ಸಿಬ್ಬಂದಿಗಳ ಸಂಚಾರಕ್ಕೆ ಮಾತ್ರ ಕಲ್ಪಿಸಲಾಗಿತ್ತು. ಕರ್ಫ್ಯೂ ತೆರವುಗೊಳಿಸಿರುವುದರಿಂದ ಶನಿವಾರ ಮತ್ತು ಭಾನುವಾರ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಮೆಟ್ರೊ ರೈಲು ಸಂಚಾರವನ್ನೂ ಕರ್ಫ್ಯೂ ಸಂದರ್ಭದಲ್ಲಿ ಕಡಿಮೆ ಮಾಡಲಾಗಿತ್ತು. ಈಗ ಎಂದಿನಂತೆ ಬೆಳಿಗ್ಗೆ 5ರಿಂದ ರಾತ್ರಿ 11 ಗಂಟೆ ತನಕ ರೈಲುಗಳು ಸಂಚರಿಸಲಿವೆ. ಭಾನುವಾರ ಬೆಳಿಗ್ಗೆ 7ರಿಂದ ಮೆಟ್ರೊ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.