ಶನಿವಾರ, ಸೆಪ್ಟೆಂಬರ್ 26, 2020
27 °C

ಬಿಎಂಟಿಸಿಗೆ ಈ ವರ್ಷ 3 ಸಾವಿರ ಬಸ್‌ ಸೇರ್ಪಡೆ: ಶಿಖಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿ. ಶಿಖಾ

ಬೆಂಗಳೂರು: ‘ಕೊನೆಯ ತಾಣದ ಪ್ರಯಾಣಿಕರಿಗೂ ಬಸ್ ಸೌಕರ್ಯ ಒದಗಿಸಲು ಪರಿಣಾಮಕಾರಿ ಯೋಜನೆ ರೂಪಿಸಲಾಗಿದೆ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ತಿಳಿಸಿದರು.

ಎನ್ವಿರಾನ್‌ಮೆಂಟ್ ಸಪೋರ್ಟ್‌ ಗ್ರೂಪ್ (ಇಎಸ್‌ಜಿ) ಶುಕ್ರವಾರ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಗರದಲ್ಲಿ ಬಸ್‌ಗಳ ಕಾರ್ಯಾಚರಣೆ ಹಿಗ್ಗಿಸಲು ಇರುವ ಅವಕಾಶಗಳ ಬಗ್ಗೆ ಅಧ್ಯಯನ ನಡೆಸಿದ್ದೇವೆ. ಅದಕ್ಕೆ ಪೂರಕವಾದ ಮೂಲ ಸೌಕರ್ಯವನ್ನೂ ನಿರ್ಮಾಣ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

‘ಮುಂಬೈಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಕೋವಿಡ್ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆ ಕಾಪಾಡುವ ಜತೆಗೆ ಬಸ್ ಸಂಚಾರ ಮುಂದುವರಿಸಲಾಗಿದೆ. ಪ್ರತಿದಿನ 10 ಲಕ್ಷ ಪ್ರಯಾಣಿಕರು ಬಸ್‌ಗಳನ್ನು ಬಳಸುತ್ತಿದ್ದಾರೆ’ ಎಂದರು.

‘ಸದ್ಯ ಸಂಸ್ಥೆಯಲ್ಲಿ 6,500 ಬಸ್‌ಗಳಿವೆ. ನಗರದ ಎಲ್ಲಾ ಕೊನೆಯ ತಾಣಗಳನ್ನು ತಲುಪಲು 10 ಸಾವಿರ ಬಸ್‌ಗಳ ಅವಶ್ಯಕತೆ ಇದೆ. ಈ ವರ್ಷದಲ್ಲೇ ಹೊಸದಾಗಿ 3 ಸಾವಿರ ಬಸ್‌ಗಳು ಬಿಎಂಟಿಸಿಗೆ ಸೇರ್ಪಡೆಯಾಗಲಿವೆ’ ಎಂದು ವಿವರಿಸಿದರು.

‘ಬಸ್‌ಗಳು ನಿಲ್ದಾಣಕ್ಕೆ ಬರಲಿರುವ ನೈಜ ಸಮಯದ ಮಾಹಿತಿ ಒಳಗೊಂಡ ‘ನಮ್ಮ ಬಿಎಂಟಿಸಿ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಅದನ್ನು ಇನ್ನಷ್ಟು ಮೇಲ್ದರ್ಜೆಗೆ ಏರಿಸುವ ಉದ್ದೇಶವೂ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು