ಮಂಗಳವಾರ, ಜನವರಿ 18, 2022
23 °C

ಬಿಎಂಟಿಸಿ: ಶುಲ್ಕ ರಶೀದಿ ಇದ್ದರೆ ಪ್ರಯಾಣಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ಗಳಲ್ಲಿ ಶುಲ್ಕ ರಶೀದಿ ಅಥವಾ ಶಿಕ್ಷಣ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಲು ಡಿ.15ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

‘ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ 2021–22ನೇ ಶೈಕ್ಷಣಿಕ ಸಾಲಿನ 1ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳು ಪಾಸ್‌ ಪಡೆಯಲು ಸಮಯಾವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು ಪಾಸ್‌ ಬದಲಿಗೆ ರಶೀದಿ, ಗುರುತಿನ ಚೀಟಿ ತೋರಿಸಿ ಡಿ.15ರವರೆಗೆ ಮಾತ್ರ ಪ್ರಯಾಣಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.