ಶನಿವಾರ, ಜುಲೈ 31, 2021
28 °C

ಹೆಚ್ಚಿನ ಪ್ರಯಾಣಿಕರಿಗೆ ಅವಕಾಶ: ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಸ್‌ನಲ್ಲಿರುವ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ದ ಲೋಕೇಶ್‌ಕುಮಾರ್ ಎಂಬ ನಿರ್ವಾಹಕರಿಗೆ ಬಿಎಂಟಿಸಿ ನೋಟಿಸ್ ನೀಡಿದೆ.

‘ತಿಪ್ಪಸಂದ್ರದಿಂದ ಮಾರ್ಕೇಟ್‌ಗೆ ಹೋಗುವ ಮಾರ್ಗದಲ್ಲಿ ಸೋಮವಾರ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಮೂಲಕ ಸಂಸ್ಥೆಯ ನಿಯಮ ಉಲ್ಲಂಘಿಸಿದ್ದೀರಿ. ಕರ್ತವ್ಯದಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ವಹಿಸಿರುವ ನೀವು ಮೂರು ದಿನಗಳಲ್ಲಿ ಸಮಜಾಯಷಿ ನೀಡಬೇಕು. ಇಲ್ಲದಿದ್ದರೆ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಬಿಎಂಟಿಸಿ ಅಂಜನಾಪುರ ಘಟಕ ವ್ಯವಸ್ಥಾಪಕರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು