ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಬಿಎಂಟಿಸಿ ಯಶವಂತಪುರ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ.ರಾಮಕೃಷ್ಣರೆಡ್ಡಿಗೆ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ಅಕ್ರಮ ಆಸ್ತಿ ಹೊಂದಿರುವ ಸಂಬಂಧ ರಾಮಕೃಷ್ಣ ರೆಡ್ಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಬಲ್ಲ ಮೂಲಗಳ ಆದಾಯಕ್ಕಿಂತ ₹61,45,944 ಅಂದರೆ ಶೇಕಡ 29.84 ರಷ್ಟು ಅಕ್ರಮ ಆಸ್ತಿ ಹೊಂದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ತನಿಖಾಧಿಕಾರಿ ಕೆ.ಎಸ್.ಮುನಿಯಪ್ಪ ಅವರು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು.

ಆರೋಪ ಸಾಬೀತಾದ ಕಾರಣ ಆರೋಪಿಗೆ ಮೂರು ವರ್ಷ ಕಠಿಣ ಸಜೆ, ₹70 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಆದೇಶದಲ್ಲಿ ತಿಳಿಸಿದ್ದಾರೆ.

ಅಭಿಯೋಜಕ ಮಂಜುನಾಥ ಹೊನ್ನಯ್ಯ ನಾಯಕ್ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.