ಬುಧವಾರ, ಜನವರಿ 27, 2021
16 °C

ಬಸ್‌ ಪ್ರಯಾಣ: ವಿದ್ಯಾರ್ಥಿಗಳಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ 2019–20ನೇ ಸಾಲಿನಲ್ಲಿ ವಿತರಣೆ ಮಾಡಿದ್ದ ಪಾಸ್‌ಗಳನ್ನು ತೋರಿಸಿ ಪ್ರಯಾಣಿಸಲು ಸಂಸ್ಥೆಯು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದೆ.

ಕಳೆದ ಸಾಲಿನ ವಿತರಿಸಿದ್ದ ಸ್ಮಾರ್ಟ್‌ ಕಾರ್ಡ್‌ ವಿದ್ಯಾರ್ಥಿ ಪಾಸು ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲೆ ಅಥವಾ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ವಿದ್ಯಾರ್ಥಿಯ ವಾಸಸ್ಥಳದಿಂದ ಶಾಲೆ/ಕಾಲೇಜಿನವರೆಗೆ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಮುಂದಿನ ಆದೇಶದವರೆಗೂ ಈ ಸೇವೆ ಇರಲಿದೆ ಎಂದು ಬಿಎಂಟಿಸಿ ಸಂಸ್ಥೆ ಪ್ರಕಟಣೆ ತಿಳಿಸಿದೆ.

6ರಿಂದ 10ನೇ ತರಗತಿ, 12ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇದು ಅನ್ವಯಿಸಲಿದೆ.

ಅಲ್ಲದೆ, 2020-21ನೇ ಸಾಲಿನ ವಿದ್ಯಾರ್ಥಿ ಬಸ್‌ ಪಾಸ್‌ಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ. ಪಾಸುಗಳ ಅರ್ಜಿ ಸಂಸ್ಥೆಯ ವೆಬ್‌ಸೈಟ್‌ http://mybmtc.karnataka.gov.in ಅಥವಾ ಸೇವಾ ಸಿಂಧು ಪೋರ್ಟಲ್‌ ಮೂಲಕ ಪಡೆಯಬಹುದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.