ಬಿಎಂಟಿಸಿಯಲ್ಲಿ ಯುಪಿಐ ಆಧಾರಿತ ಪಾವತಿ ವ್ಯವಸ್ಥೆ ಅಳವಡಿಕೆಯಿಂದ ಪ್ರಯಾಣಿಕರಿಗೆ ವೇಗವಾಗಿ ಸುಲಭ ಮತ್ತು ನಗದುರಹಿತ ಟಿಕೆಟ್ ನೀಡುವ ವ್ಯವಸ್ಥೆಯನ್ನು ಒದಗಿಸಲಾಗಿದೆ. ಸುರಕ್ಷಿತ ಮತ್ತು ವಿಶ್ವಾಸಾರ್ಹ ವಹಿವಾಟು ಸಾಧ್ಯವಾಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಯಾಣಿಕರು ಡಿಜಿಟಲ್ ಪಾವತಿಯನ್ನು ಅಳವಡಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ. ತಿಳಿಸಿದ್ದಾರೆ.