ಗುರುವಾರ , ಮೇ 26, 2022
23 °C

ವ್ಹೀಲಿಂಗ್: ದ್ವಿಚಕ್ರ ವಾಹನ ಗುದ್ದಿ ಮಹಿಳೆಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗೋರಿಪಾಳ್ಯದಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ್ದ ಯುವಕರಿಬ್ಬರು, ದ್ವಿಚಕ್ರ ವಾಹನವನ್ನು ಮಹಿಳೆಗೆ ಗುದ್ದಿಸಿ ಪರಾರಿಯಾಗಿದ್ದಾರೆ.

‘ಏಪ್ರಿಲ್ 6ರಂದು ನಡೆದಿರುವ ಘಟನೆಯಿಂದಾಗಿ ಮಹಿಳೆ ಗಾಯ ಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳು ತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗೋರಿಪಾಳ್ಯದ ನರಸಿಂಹ ಸ್ವಾಮಿ ದೇವಸ್ಥಾನದ ರಸ್ತೆ ಪಕ್ಕ ಮಹಿಳೆ ನಡೆದು ಹೋಗುತ್ತಿದ್ದರು. ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿಕೊಂಡು ಬಂದಿದ್ದ ಯುವಕರು, ದ್ವಿಚಕ್ರ ವಾಹನವನ್ನು ಮಹಿಳೆಗೆ ಗುದ್ದಿಸಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ ಯಾಗಿದೆ. ಅದನ್ನೇ ಪುರಾವೆ ಯಾಗಿ ಪರಿಗಣಿಸಿ, ಯುವಕರ  ಪತ್ತೆಗೆ ಕ್ರಮ ಕೈಗೊಂಡಿದ್ದೇವೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.