ಬೆಂಗಳೂರು: ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ನಿರಾಶ್ರಿತರು, ಸ್ವಚ್ಛತಾ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಮೂರು ಸಾವಿರ ಮಂದಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನವನ್ನುಜಂಬೂಸವಾರಿ ದಿಣ್ಣೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದಬೆಂಗಳೂರು ನಗರ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ,‘ ಬಿಜೆಪಿಗರು ಕೋವಿಡ್ಗೆ ಹೆದರಿ ಮನೆಯಲ್ಲಿ ಅಡಗಿ ಕೂತಿದ್ದರು. ಅಂತಹ ಸಂದರ್ಭದಲ್ಲೂ ಆರ್.ಕೆ.ರಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಸಿಕೆ ಅಭಿಯಾನದ ಮೂಲಕ ಕ್ಷೇತ್ರದ ಜನರ ನೆರವಿಗೆ ನಿಂತಿರುವುದು ಶ್ಲಾಘನೀಯ’ ಎಂದರು.

ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, ‘ಅಭಿವೃದ್ದಿ ವಂಚಿತ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ದುರಾಡಳಿತ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.