ಬೆಂಗಳೂರು: ಆಸ್ತಿ ತೆರಿಗೆ ಪಾವತಿ ವಿಳಂಬಕ್ಕೆ ಶೇ 200ರವರೆಗೆ ದಂಡ ವಿಧಿಸುತ್ತಿರುವ ಬಿಬಿಎಂಪಿಯ ಕ್ರಮಕ್ಕೆ ಬೆಂಗಳೂರು ನವನಿರ್ಮಾಣ ಪಾರ್ಟಿ (ಬಿಎನ್‌ಪಿ) ಆಕ್ಷೇಪ ವ್ಯಕ್ತಪಡಿಸಿದೆ.

‘ಕಳೆದ ಐದು ವರ್ಷಗಳಲ್ಲಿ ಆಸ್ತಿ ತೆರಿಗೆ ಪಾವತಿಸದ ಕಟ್ಟಡಗಳ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಲು ಆರಂಭಿಸಿದ್ದು ಭಾರಿ ದಂಡ ವಿಧಿಸುತ್ತಿದೆ. ಕೆಲವರಿಗೆ ಲಕ್ಷ ರೂಪಾಯಿಯವರೆಗೆ ದಂಡ ನೀಡುವಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಕಟ್ಟಡದ ಮಾಲೀಕರಿಗೆ ಯಾವುದೇ ಮುನ್ಸೂಚನೆ ಅಥವಾ ಮಾಹಿತಿ ನೀಡದೆ ಇದ್ದಕ್ಕಿದ್ದಂತೆ ನೋಟಿಸ್ ನೀಡಲಾಗುತ್ತಿದೆ’ ಎಂದು ಪಕ್ಷ ದೂರಿದೆ.

‘2016ರಲ್ಲಿ ವಲಯಗಳ ಪುನರ್ ವಿಂಗಡಣೆಯ ಆಧಾರದ ಮೇಲೆ ಬಿಬಿಎಂಪಿಯು ಈ ನೋಟಿಸ್‌ಗಳನ್ನು ನೀಡಲಾಗುತ್ತಿದೆ. ವಲಯಗಳ ಪುನರ್‌ವಿಂಗಡಣೆ ಬಗ್ಗೆ ಎಷ್ಟೋ ಜನರಿಗೆ ಮಾಹಿತಿ ಇಲ್ಲ. ತಮ್ಮ ಕಟ್ಟಡ ಯಾವ ವಲಯದಲ್ಲಿ ಬರುತ್ತದೆ ಎಂಬ ಬಗ್ಗೆಯೂ ಗೊತ್ತಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಬಿಬಿಎಂಪಿ ಮಾಡಿಲ್ಲ. ಈಗ ಇದ್ದಕ್ಕಿದ್ದಂತೆ ಭಾರಿ ದಂಡ ವಿಧಿಸುತ್ತಿರುವುದು ಸರಿಯಲ್ಲ’ ಎಂದು ಪಕ್ಷವು ಪ್ರಕಟಣೆಯಲ್ಲಿ ಹೇಳಿದೆ.

ನೋಟಿಸ್ ಪಡೆದಿರುವ ಸಾವಿರಾರು ಜನ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಿರುವ ಬಿಎನ್‌ಪಿ, ಈ ಕುರಿತು ಮುಖ್ಯಮಂತ್ರಿಯವರಿಗೆ ಆನ್‌ಲೈನ್‌ನಲ್ಲಿ ಕೋರಿಕೆ ಸಲ್ಲಿಸುವ ಅಭಿಯಾನ ಆರಂಭಿಸಿದೆ. ಈ ಆನ್‌ಲೈನ್ ಅರ್ಜಿಗೆ ಸಹಿ ಹಾಕಿ ಅಭಿಯಾನವನ್ನು ಬೆಂಬಲಿಸಲು https://propertytax.nammabnp.org/ ಸಂಪರ್ಕ ಕೊಂಡಿ ಬಳಸಿ ಎಂದು ಪಕ್ಷವು ಮನವಿ ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.