ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಲೆರೊ ಹಾಗೂ ಬೈಕ್‌ ಅಪಘಾತ: ಸೆಕ್ಯೂರಿಟಿ ಗಾರ್ಡ್‌ ಸಾವು

Published 13 ಮಾರ್ಚ್ 2024, 16:02 IST
Last Updated 13 ಮಾರ್ಚ್ 2024, 16:02 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕದ ನಾಗೇನಹಳ್ಳಿಯಲ್ಲಿ ಬಲೆರೊ ಹಾಗೂ ಬೈಕ್‌ ನಡುವೆ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸೆಕ್ಯೂರಿಟಿ ಗಾರ್ಡ್‌ ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿದ್ದ ಜಯದೇವ್‌(25) ಮೃತಪಟ್ಟವರು.

‘ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಮಾರ್ಗ ಮಧ್ಯದ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಬೈಕ್‌ಗೆ ಪೆಟ್ರೋಲ್‌ ತುಂಬಿಸಿಕೊಂಡು ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ನೆಲಕ್ಕೆ ಉರುಳಿ ಬಿದ್ದ ಜಯದೇವ್‌ ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದವು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಯಲಹಂಕ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT