ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್ ಬೆದರಿಕೆ: ತಾಂತ್ರಿಕ ತನಿಖೆ- ಅಲೋಕ್ ಮೋಹನ್

Published 11 ಜನವರಿ 2024, 21:16 IST
Last Updated 11 ಜನವರಿ 2024, 21:16 IST
ಅಕ್ಷರ ಗಾತ್ರ

ಬೆಂಗಳೂರು: ‘ಇ-ಮೇಲ್ ಮೂಲಕ ಶಾಲೆಗಳು ಹಾಗೂ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಾಂತ್ರಿಕ ತನಿಖೆ ನಡೆಯುತ್ತಿದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದರು.

‘ರಾಜ್ಯದಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ಇಲ್ಲ. ಒಂದು ವೇಳೆ ಆ ರೀತಿಯ ಘಟನೆಗಳು ನಡೆದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮತೀಯ ಗೂಂಡಾಗಿರಿಯಂತಹ ಘಟನೆಗಳಿಗೆ ಅವಕಾಶ ನೀಡದಂತೆ ಎಲ್ಲ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT