ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬಾಂಬ್‌ ಬೆದರಿಕೆ ಪ್ರಕರಣ ಸಿಸಿಬಿಗೆ ವರ್ಗ

Published 12 ಜನವರಿ 2024, 21:01 IST
Last Updated 12 ಜನವರಿ 2024, 21:01 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಸಂದೇಶ
ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ವರ್ಗಾವಣೆ ಮಾಡಿ, ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಜ.6ರಂದು ಕಿಡಿಗೇಡಿಗಳು ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳುಹಿಸಿದ್ದರು. ಮ್ಯೂಸಿಯಂನಲ್ಲಿ ಹಲವು ಸ್ಫೋಟಕಗಳನ್ನು ಬಚ್ಚಿಡಲಾಗಿದೆ. ಎಲ್ಲವೂ ಸ್ಫೋಟಗೊಳ್ಳು‌ತ್ತವೆ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದರು. ಸ್ಥಳಕ್ಕೆ ತೆರಳಿದ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು, ತಪಾಸಣೆ ನಡೆಸಿದ್ದರು. ಅದಾದ ಮೇಲೆ ಹುಸಿ ಬಾಂಬ್‌ ಕರೆ ಎಂಬುದು ಗೊತ್ತಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT