ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ ಹಾಗೂ ನಗರದ ಶಾಲಾ– ಕಾಲೇಜುಗಳು, ಹೋಟೆಲ್ಗಳು, ರಾಯಭಾರ ಕಚೇರಿಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದು, ಈ ಸಂಬಂಧ ಎಂಟು ರಾಜ್ಯಗಳ ಪೊಲೀಸರು ಹಾಗೂ ಸಿಬಿಐ ಅಧಿಕಾರಿಗಳ ಜತೆಗೆ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಮೂರು ಮಂದಿಯೇ ತಮ್ಮ ಹೆಸರು ಬದಲಾಯಿಸಿಕೊಂಡು ಕರ್ನಾಟಕ ಸೇರಿ ದೇಶದ ವಿವಿಧೆಡೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂಬುದು ಗೊತ್ತಾಗಿದೆ.

ಆರೋಪಿಗಳ ಪತ್ತೆ ಮಾಡಲು ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ ಸೇರಿ 8 ರಾಜ್ಯಗಳ ಪೊಲೀಸರ ಜತೆ ಸಿಬಿಐ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ನಿವಾಸಕ್ಕೆ ಆರ್ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶಗಳು ಬಂದಿದ್ದವು. ಒಂದೇ ಇ–ಮೇಲ್ ವಿಳಾಸದಿಂದಲೇ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.