ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಿಗೆ ಬಾಂಬ್ ಬೆದರಿಕೆ: ಗಂಭೀರವಾಗಿ ಪರಿಗಣಿಸಿದ್ದೇವೆ– ಸಚಿವ ಮಧು ಬಂಗಾರಪ್ಪ

'ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
Published 1 ಡಿಸೆಂಬರ್ 2023, 9:01 IST
Last Updated 1 ಡಿಸೆಂಬರ್ 2023, 9:01 IST
ಅಕ್ಷರ ಗಾತ್ರ

ಶಿವಮೊಗ್ಗ: 'ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಹೀಗಾಗಿ ಬೆದರಿಕೆ ಸಂದೇಶವನ್ನು ನಿರ್ಲಕ್ಷಿಸಿಲ್ಲ. ನಾನು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಮಾಹಿತಿ ಪಡೆದಿದ್ದೇನೆ' ಎಂದರು.

'ಈ ಹಿಂದೆ ಯಾವುದೋ ಒಂದು ಶಾಲೆಗೆ ಬೆದರಿಕೆ ಕರೆ ಇಲ್ಲವೇ ಸಂದೇಶ ಬರುತ್ತಿತ್ತು. ಈಗ ಒಂದೇ ಬಾರಿ ಹಲವು ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಶೀಘ್ರ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಒಟ್ಟು 44 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT