ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಿಗೆ ಬಾಂಬ್‌ ಬೆದರಿಕೆ: ಮಕ್ಕಳ ಸುರಕ್ಷತಾ ನೀತಿ ಕಡ್ಡಾಯಕ್ಕೆ ಒತ್ತಾಯ

Published 2 ಡಿಸೆಂಬರ್ 2023, 16:33 IST
Last Updated 2 ಡಿಸೆಂಬರ್ 2023, 16:33 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲಾ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ನೀತಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಭಯಭೀತರಾದ ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ‘ಚೈಲ್ಡ್ ರೈಟ್ಸ್‌ ಟ್ರಸ್ಟ್‌’ ಪತ್ರ ಬರೆದಿದೆ.

ಮಕ್ಕಳ ಸುರಕ್ಷತಾ ನೀತಿಯನ್ನು ಕಡ್ಡಾಯಗೊಳಿಸಿ 2016ರಲ್ಲಿ ಆದೇಶ ಹೊರಡಿಸಿದ್ದರೂ, ಶಾಲೆಗಳು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟ್ರಸ್ಟ್‌ನ ನಾಗಸಿಂಹ ಜಿ.ರಾವ್‌ ಹೇಳಿದ್ದಾರೆ.

ಮಕ್ಕಳಿಗೆ ಆಘಾತದಿಂದ ಹೊರಬರಲು, ಶಿಕ್ಷಕರಿಗೆ ವಿಪತ್ತು ನಿರ್ವಹಣಾ ತರಬೇತಿ ನೀಡಲು ಸಹಾಯ  ಶಾಲಾ ಆಡಳಿತ ಮಂಡಳಿಗಳು ತರಬೇತಿ ಆಯೋಜಿಸಲು ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT