ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಶಾಲೆಗಳಲ್ಲಿ ಬಾಂಬ್‌ ಬೆದರಿಕೆ: ಶಾಂತಿ ಕದಡುವ ಯತ್ನ, ಸಿಎಂ ಬೊಮ್ಮಾಯಿ

Last Updated 8 ಏಪ್ರಿಲ್ 2022, 11:05 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಶಾಲೆಗಳ ಬಾಂಬ್ ಬೆದರಿಕೆ ಬಗ್ಗೆ ಆತಂಕಪಡಬೇಕಾಗಿಲ್ಲ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಿಂದ ಕರೆ ಬಂದಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಪೋಷಕರು ಆತಂಕಪಡಬೇಕಾಗಿಲ್ಲ. ರಾಜ್ಯಕ್ಕೆ ಕೆಟ್ಟ ಹೆಸರು ತರಬೇಕು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಪ್ರಕರಣವನ್ನು ಪೊಲೀಸ್‌ ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡು ತಪಾಸಣೆ ನಡೆಸುತ್ತಿದ್ದಾರೆ. ಶಾಂತಿ ಕದಡುವ ಹುನ್ನಾರ ನಡೆದಿದೆ. ಬೆದರಿಕೆ ಕರೆ ಮಾಡಿದವರನ್ನು ಬಂಧಿಸುತ್ತೇವೆ. ದೂರವಾಣಿ ಕರೆಗಳ ವಿವರ ಪರಿಶೀಲಿಸಲು ಹೇಳಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲೂ ಸೂಚಿಸಲಾಗಿದೆ ಎಂದರು.

ಈ ಘಟನೆಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರಿಗೆ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್‌ ಸಮಗ್ರ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT