ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಇಬ್ಬರು ವಶಕ್ಕೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ
Last Updated 9 ಆಗಸ್ಟ್ 2022, 20:53 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಇಂಡಿಗೊ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಸಿದ್ದ ಆರೋಪದಡಿ ಇಬ್ಬರು ಪ್ರಯಾಣಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘174 ಪ್ರಯಾಣಿಕರಿದ್ದ ಇಂಡಿಗೊ ವಿಮಾನ, ಜೈ‍ಪುರದಿಂದ ಬೆಂಗಳೂರಿಗೆ ಸೋಮವಾರ ರಾತ್ರಿ 9.25ರ ಸುಮಾರಿಗೆ ಬಂದಿತ್ತು. ಅದರ ಶೌಚಾಲಯದಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಸಂದೇಶವಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಮಾನವನ್ನು ನಿಲ್ದಾಣದಲ್ಲಿ ಇಳಿಸಬೇಡಿ. ವಿಮಾನದಲ್ಲಿ ಬಾಂಬ್ ಇದೆ. ಇಳಿಸಿದರೆ ಸ್ಫೋಟವಾಗುತ್ತದೆ’ ಎಂದು ಟಿಶ್ಯೂ ಪೇಪರ್‌ನಲ್ಲಿ ಬರೆಯಲಾಗಿತ್ತು. ಅದನ್ನು ಗಮನಿಸಿದ್ದ ವಿಮಾನದ ಸಿಬ್ಬಂದಿ, ರಕ್ಷಣಾ ಪಡೆಗಳಿಗೆ ಮಾಹಿತಿ ನೀಡಿದ್ದರು. ನಂತರವೇ ವಿಮಾನವನ್ನು ನಿಲ್ದಾಣದಲ್ಲಿ ಇಳಿಸಲಾಗಿತ್ತು’ ಎಂದು ತಿಳಿಸಿವೆ.

‘ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಜೊತೆ ವಿಮಾನದಲ್ಲಿ ಪರಿಶೀಲನೆ ನಡೆಸಲಾಯಿತು. ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆಯೆಂದು ರಕ್ಷಣಾ ಪಡೆಯವರು ಘೋಷಿಸಿದರು’ ಎಂದು ಮೂಲಗಳು ಹೇಳಿವೆ.

ಪ್ರಯಾಣಿಕರ ಕೈ ಬರಹ ಸಂಗ್ರಹ: ವಿಮಾನದಲ್ಲಿದ್ದ ಪ್ರಯಾಣಿಕರೇ ಬೆದರಿಕೆ ಹಾಕಿರುವುದು ಖಾತ್ರಿಯಾಗಿತ್ತು. ಎಲ್ಲ ಪ್ರಯಾಣಿಕರ ಕೈ ಬರಹ ಸಂಗ್ರಹ ಮಾಡಿದ ರಕ್ಷಣಾ ಪಡೆಗಳವರು, ಪರಿಶೀಲನೆ ನಡೆಸಿದರು.

ಟಿಶ್ಯೂ ಪೇಪರ್‌ನಲ್ಲಿದ್ದ ಬರಹಕ್ಕೆ ಹೋಲಿಕೆಯಾದ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಉಳಿದವರನ್ನು ಮಾತ್ರ ನಿಲ್ದಾಣದಿಂದ ಹೊರಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT