ಬೆಂಗಳೂರು: ಕೋರಮಂಗಲದಲ್ಲಿ ಇರುವ ಪಾಸ್ಪೋರ್ಟ್ ಪ್ರಾದೇಶಿಕ ಕಚೇರಿಗೆ ಹುಸಿ ಬಾಂಬ್ ಬೆದರಿಕೆಯ ಇ–ಮೇಲ್ ಬಂದಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳವು ತಪಾಸಣೆ ನಡೆಸಿ, ಇದೊಂದು ಹುಸಿ ಬೆದರಿಕೆ ಎಂದು ದೃಢಪಡಿಸಿದರು.

‘ಕಚೇರಿಯಲ್ಲಿ ಸ್ಫೋಟಕ ವಸ್ತುಗಳನ್ನು ಇಡಲಾಗಿದೆ. ಅದು ಕೆಲವೇ ಹೊತ್ತಿನಲ್ಲಿ ಸ್ಫೋಟಗೊಳ್ಳಲಿದೆ’ ಎಂಬುದಾಗಿ ಇ–ಮೇಲ್ನಲ್ಲಿ ಉಲ್ಲೇಖಿಸಲಾಗಿತ್ತು. ಇ–ಮೇಲ್ ಗಮನಿಸಿದ ಕಚೇರಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಬಾಂಬ್ ತಪಾಸಣೆ ಹಾಗೂ ನಿಷ್ಕ್ರಿಯ ದಳ, ಶ್ವಾನದಳದ ಸಿಬ್ಬಂದಿ ಕಚೇರಿಯಲ್ಲಿ ಹುಡುಕಾಟ ನಡೆಸಿದರು. ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಮೂಲಗಳು ತಿಳಿಸಿವೆ.

ಪರಿಶೀಲನಾ ಕಾರ್ಯ ಪೂರ್ಣವಾದ ಮೇಲೆ ಪಾಸ್ಪೋರ್ಟ್ ಪ್ರಕ್ರಿಯೆಯನ್ನು ಮರುಪ್ರಾರಂಭಿಸಲಾಯಿತು. ಇ–ಮೇಲ್ ಕಳುಹಿಸಿದ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಸೈಬರ್ ವಿಭಾಗದ ಸಹಕಾರದೊಂದಿಗೆ ತನಿಖೆ ನಡೆಸಲಾಗುತ್ತಿದೆ. ಇ–ಮೇಲ್ ಮೂಲ, ಐಪಿ ವಿಳಾಸ ಹಾಗೂ ತಾಂತ್ರಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇ–ಮೇಲ್ ಅನ್ನು ತಮಿಳು ಭಾಷೆಯಲ್ಲಿ ಬರೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.