ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕಂಪನಿಯ ಮಾಜಿ ಮಹಿಳಾ ಉದ್ಯೋಗಿ ಮೇಲೆ ಪೊಲೀಸರು ಅನುಮನ ವ್ಯಕ್ತಪಡಿಸುತ್ತಿದ್ದಾರೆ.

ಬಾಂಬ್ ಬೆದರಿಕೆ ಕರೆ ಬಗ್ಗೆ ತನಿಖೆ ನಡೆಸುತ್ತಿರುವ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು,ಮಾಜಿ ಉದ್ಯೋಗಿ ಎನ್ನಲಾದ ಮಹಿಳೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.

'ಕಂಪನಿಯ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಬಂದಿತ್ತು. ಕಚೇರಿಯಲ್ಲಿ ಬಾಂಬ್ ಇರಿಸಿದ್ದಾಗಿ ಹೇಳಲಾಗಿತ್ತು. ಭಯಗೊಂಡ ಸಿಬ್ಬಂದಿ, ಠಾಣೆಗೆ ಮಾಹಿತಿ ನೀಡಿದ್ದರು' ಎಂದು ಪೊಲೀಸರು ಹೇಳಿದರು.

'ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ಮಾಜಿ ಮಹಿಳಾ ಉದ್ಯೋಗಿ ಬಾಂಬ್ ಬೆದರಿಕೆ ಕರೆ ಮಾಡಿರುವುದು ಗೊತ್ತಾಗುತ್ತಿದೆ. ಉದ್ಯೋಗಿ ವಿಚಾರಣೆಯಿಂದ ನಿಜಾಂಶ ತಿಳಿಯಬೇಕಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.