ಭಾನುವಾರ, ಜನವರಿ 26, 2020
18 °C

ಮಸಾಜ್ ನೆಪದಲ್ಲಿ ಚಿನ್ನಾಭರಣ ಕದ್ದೊಯ್ದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಹಕ್ಕೆ ಎಣ್ಣೆ ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಬಂದಿದ್ದ ಅಪರಿಚಿತನೊಬ್ಬ ಚಿನ್ನಾಭರಣ ಕದ್ದುಕೊಂಡು ಹೋಗಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಇದೇ 7ರಂದು ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಸಾಜ್‌ ಮಾಡುವ ವೇಳೆ ಚಿನ್ನಾಭರಣ ಧರಿಸಬಾರದೆಂದು ಹೇಳಿದ್ದ ಆರೋಪಿ, ಅವುಗಳನ್ನು ಬಿಚ್ಚಿಸಿ ಪಕ್ಕದಲ್ಲೇ ಇಟ್ಟುಕೊಂಡಿದ್ದ. ನಿವಾಸಿಯು ಮಸಾಜ್ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗಲೇ ಆರೋಪಿ, ₹37 ಸಾವಿರ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಹೋಗಿದ್ದಾನೆ’ ಎಂದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು