ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಜೀತದಾಳುಗಳ ರಕ್ಷಣೆ

Last Updated 16 ಜೂನ್ 2019, 20:31 IST
ಅಕ್ಷರ ಗಾತ್ರ

ಬೆಂಗಳೂರು: ಆಡುಗೋಡಿ ಗ್ರಾಮದ ಸಿಎಆರ್‌ ಗಾರ್ಡನ್‌ ವಸತಿಗೃಹ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ 12 ಮಂದಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಕಂದಾಯ ಅಧಿಕಾರಿ ಮಾರುತಿ ಪ್ರಸಾದ್‌ ನೀಡಿದ ದೂರಿನ ಆಧಾರದಲ್ಲಿ ಕಟ್ಟಡ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಮುದಾವತ್‌ ಗೋಪಾಲ್‌ ವಿರುದ್ಧ ಜೀತ ಪದ್ಧತಿ (ನಿಷೇಧ) ಕಾಯ್ದೆಯಡಿ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದ ವೇಳೆ, ಅಲ್ಲಿ ಒಟ್ಟು 15 ಮಂದಿ ಕೆಲಸ ಮಾಡುತ್ತಿದ್ದರು. ಅವರೆಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಈ ಪೈಕಿ 12 ಮಂದಿ ಜೀತದಾಳುಗಳಾಗಿ ಕೆಲಸ ಮಾಡುತ್ತಿರುವುದು ಗೊತ್ತಾಗಿತ್ತು. ಈ ಬಗ್ಗೆ ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಪ್ರಮಾಣ ಪತ್ರ ನೀಡಿದ ಹಿನ್ನೆಲೆಯಲ್ಲಿ ಈ ಎಲ್ಲರನ್ನೂ ಕೆಲಸದಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT