ಬೆಂಗಳೂರು: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಏಕಗವಾಕ್ಷಿ ಯೋಜನೆಯಡಿ ಪುಸ್ತಕ ಖರೀದಿಗೆ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ‘ಏಕಗವಾಕ್ಷಿ ಯೋಜನೆ ಮುಂದುವರಿಸಲು ಎದುರಾಗಿರುವ ಕಾನೂನು ತೊಡಕನ್ನು ಸರ್ಕಾರವು ತುರ್ತಾಗಿ ನಿವಾರಿಸಬೇಕು’ ಎಂದು ಪ್ರಾಧಿಕಾರದ ಅಧ್ಯಕ್ಷ ಮಾನಸ ಮನವಿ ಮಾಡಿದ್ದರು. ಆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಿವರಾಜ ತಂಗಡಗಿ, ಮುಖ್ಯಮಂತ್ರಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದರು. ಅದರಂತೆ ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ.

‘ಈ ಯೋಜನೆಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಇರದ ಪರಿಣಾಮ ಗ್ರಂಥಾಲಯ ಕರವನ್ನು ಪುಸ್ತಕ ಖರೀದಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ತಾಂತ್ರಿಕ ತೊಡಕನ್ನು ಸರಿಪಡಿಸಬೇಕಿದೆ. ಅಗತ್ಯ ಲೆಕ್ಕ ಶೀರ್ಷಿಕೆ ಸೃಜಿಸಲು ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.