ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರವನ್ನು ಮಾಧ್ಯಮ ಎಚ್ಚರಿಸಲಿ: ವಿಧಾನ ಪರಿಷತ್ ಸದಸ್ಯ ಎಚ್‌. ವಿಶ್ವನಾಥ್

‘ಚಕ್ರವರ್ತಿಯಾಗದ ನಚ್ಚಿ’ ಪುಸ್ತಕ ಬಿಡುಗಡೆ
Last Updated 26 ಜನವರಿ 2022, 16:41 IST
ಅಕ್ಷರ ಗಾತ್ರ

ಬೆಂಗಳೂರು: ‘ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮವು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು. ಬದಲಾದ ಸನ್ನಿವೇಶದಲ್ಲಿ ಮಾಧ್ಯಮವೂ ರಾಜಕೀಯ ಪಕ್ಷಗಳ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿವೆ’ ಎಂದುವಿಧಾನ ಪರಿಷತ್ ಸದಸ್ಯ ಎಚ್‌. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

ನಚ್ಚಿ ಬಳಗ ನಗರದಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಚಕ್ರವರ್ತಿಯಾಗದ ನಚ್ಚಿ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ‘ಮಾಧ್ಯಮದಲ್ಲಿ ಈಗ ನೇರ ಬರವಣಿಗೆ ಹಾಗೂ ಹೇಳಿಕೆಗಳು ಕಾಣಸಿಗುವುದಿಲ್ಲ. ಪತ್ರಕರ್ತರಲ್ಲಿನ ಬದ್ಧತೆಯೂ ಮಾಯವಾಗುತ್ತಿದೆ.ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪಾಠದ ಮನೆಯಾಗಬೇಕು. ಆದರೆ, ಈಗ ಅದು ಕುಸಿತದ ಹಾದಿ ಹಿಡಿದಿದೆ. ರಾಜಕಾರಣ ಮತ್ತು ಮಾಧ್ಯಮ ಒಂದೇ ಎಂಬಂತಾಗಿದ್ದು, ರಾಜಕೀಯ ಪಕ್ಷಗಳ ಹಿಡಿತಕ್ಕೆ ಒಳಗಾಗುತ್ತಿವೆ. ಈಕ್ಷೇತ್ರದ ಹಿರಿಯರು ಜವಾಬ್ದಾರಿ ತೆಗೆದುಕೊಂಡು, ಸರಿಯಾದ ಹಾದಿಯಲ್ಲಿ ಮಾಧ್ಯಮ ಸಾಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ‘ನಚ್ಚಿ ಅವರಿಗೆ ಎಲ್ಲ ವಿಷಯದ ಬಗ್ಗೆಯೂ ಮಾಹಿತಿ ಇರುತ್ತಿತ್ತು.ಅವರು ತಮ್ಮದೇ ಆದ ರೀತಿಯಲ್ಲಿ ಬದುಕು ನಡೆಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಇಂತಹ ಪತ್ರಕರ್ತರ ಬದುಕು, ಬರಹಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವಾಗಬೇಕು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ನಾಲ್ಕನೆ ಅಂಗ. ಅದು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಮಾಜ ಸುಧಾರಣೆಗೆ ಶ್ರಮಿಸಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT