ಸೋಮವಾರ, ಆಗಸ್ಟ್ 8, 2022
22 °C

'ರೈತರ ಭದ್ರತೆ-ದೇಶದ ಭದ್ರತೆ' ಪುಸ್ತಕ ಬಿಡುಗಡೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ 'ರೈತರ ಭದ್ರತೆ-ದೇಶದ ಭದ್ರತೆ' ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ ಇದೇ 13ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ.

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ದೇವನೂರ ಮಹಾದೇವ, ರೈತ ಹೋರಾಟಗಾರ ಕಡಿದಾಳು ಶಾಮಣ್ಣ, ಕಾರ್ಮಿಕ ಮುಖಂಡ ಮೈಕೆಲ್ ಬಿ.ಫರ್ನಾಂಡಿಸ್, ಲೇಖಕಿ ವಿಜಯಮ್ಮ ಭಾಗವಹಿಸಲಿದ್ದಾರೆ. ಪರಿಸರ ತಜ್ಞ ಅ.ನಾ.ಯಲ್ಲಪ್ಪರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಚಾರಗೋಷ್ಠಿಯಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಎಸ್.ಆರ್.ಪಾಟೀಲ, ಎಚ್.ಕೆ.ಕುಮಾರಸ್ವಾಮಿ, ಪ್ರಕಾಶ್ ಕಮ್ಮರಡಿ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರೆಗೋಡು, ಜಿ.ಸಿ.ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ವಿ.ಗಾಯತ್ರಿ, ಸ್ವರ್ಣ ಭಟ್, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು