ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಲಂಡನ್ನಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಬರಮಾಡಿಕೊಂಡವು. ಇಲಾಖೆಯ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.