ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಬೆಂಗಳೂರು ವಕೀಲರ ಸಂಘದ ಸಹಯೋಗದಲ್ಲಿ ಇದೇ 21ರಿಂದ 23ರವರೆಗೆ ಹೈಕೋರ್ಟ್ ಆವರಣದಲ್ಲಿ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.
ಭಾರತೀಯ ವಿದ್ಯಾಭವನ ಪ್ರಕಟಿಸಿರುವ ಭಾರತೀಯ ಸಂಸ್ಕೃತಿ, ಇತಿಹಾಸ, ಧರ್ಮ, ವೇದಾಂತ ಕುರಿತಂತೆ 500ಕ್ಕೂ ಹೆಚ್ಚು ಪುಸ್ತಕಗಳು ಪ್ರದರ್ಶನದಲ್ಲಿರುತ್ತವೆ. ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ.
21ರಂದು ಬೆಳಿಗ್ಗೆ 10 ಗಂಟೆಗೆ ಹೈಕೋರ್ಟ್ ಸಭಾಂಗಣ–2ರಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರು ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ವಿದ್ಯಾಭವನದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಕೆ.ಜಿ.ರಾಘವನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಭಾರತೀಯ ವಿದ್ಯಾ ಭವನದ ಪ್ರಕಟಣೆ ತಿಳಿಸಿದೆ.