ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರುಷೋತ್ತಮ ಮಾಸ್ಟರ್, ವಿದ್ಯಾವರ್ಧಕ ಸಂಘಕ್ಕೆ ಪ್ರಶಸ್ತಿ

Last Updated 29 ಡಿಸೆಂಬರ್ 2021, 17:47 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿಗೆ ಕಾಸರಗೋಡಿನ ಬಿ. ಪುರುಷೋತ್ತಮ ಮಾಸ್ಟರ್ ಹಾಗೂ ಜಯದೇವಿತಾಯಿ ಲಿಗಾಡೆ ಪ್ರಶಸ್ತಿಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಆಯ್ಕೆಯಾಗಿದೆ.

ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿದೆ. ಪುರುಷೋತ್ತಮ ಮಾಸ್ಟರ್ ಅವರು ಕಣ್ಣೂರು ವಿಶ್ವವಿದ್ಯಾಲಯದ ಸಂದರ್ಶಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಗಡಿ ಭಾಗದಲ್ಲಿ ಕನ್ನಡದ ಅನೇಕ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ, ಹೋರಾಟ ನಡೆಸಿದ್ದರು. 1890ರ ಜು.20ರಂದು ಸ್ಥಾಪನೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘವು ನೆಲ, ಜಲ, ಭಾಷೆ ಮತ್ತು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ, ಬೆಳೆಸಲು ಶ್ರಮಿಸುತ್ತಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT