ಬುಧವಾರ, ಡಿಸೆಂಬರ್ 7, 2022
23 °C

ಗಡಿ ವಿವಾದ: ಫಡಣವೀಸ್ ಹೇಳಿಕೆಗೆ ಕಸಾಪ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ–ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನೀಡಿರುವ ಹೇಳಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಖಂಡಿಸಿದೆ. 

‘ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ಕನ್ನಡಿಗರು ಹಾಗೂ ನಮ್ಮ ಸರ್ಕಾರ ಸನ್ನದ್ಧವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಸರ್ಕಾರದ ಬೆಂಬಲಕ್ಕೆ ನಿಂತುಕೊಳ್ಳಲಿದೆ. ಮಹಾರಾಷ್ಟ್ರ
ದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಜತ್ತ, ಅಕ್ಕಲಕೋಟೆಯು ಕರ್ನಾಟಕಕ್ಕೆ ಸೇರಬೇಕು ಎನ್ನುವುದು ನಮ್ಮ ಆಗ್ರಹ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಹೇಳಿದ್ದಾರೆ.

‘ಕನ್ನಡ ನಾಡಿನ ಭಾಗಗಳಾದ ಕಾಸರಗೋಡು, ಹೊಸೂರು ಸೇರಿ ಹಲವು ಕನ್ನಡಿಗರ ಪ್ರಾಂತ್ಯಗಳನ್ನು ನಮ್ಮ ನಾಡಿಗೆ ಸೇರಿಸಿಕೊಳ್ಳಬೇಕು. ಗಡಿ ಪ್ರದೇಶದ ಹೊರನಾಡಿನಲ್ಲಿರುವ ಕನ್ನಡಿಗರು ನಮ್ಮ ನಾಡು ಸೇರುವ ತವಕದಲ್ಲಿದ್ದಾರೆ. ಕಳೆದ ಆರು ದಶಕಗಳಿಂದ ಕನ್ನಡ ನಾಡಿಗೆ ಸೇರುವ ಕನಸು ಕಾಣುತ್ತಿದ್ದಾರೆ. ಹೊರನಾಡ ಕನ್ನಡಿಗರ ಅಂತರಂಗದ ಭಾವನೆಯನ್ನು ಅರ್ಥ ಮಾಡಿಕೊಂಡು, ಅವರಿರುವ ನೆಲವನ್ನು ನಮ್ಮ ನಾಡಿಗೆ ಸೇರಿಸಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು