ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದ ಪ್ರಕರಣದಲ್ಲಿ ಆರೋಗ್ಯ ಇಲಾಖೆಯು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಏ.29ರಂದು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದು ಬಾಲಕಿ ಸೇರಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಗೋಡೆಯನ್ನು ಆರೋಗ್ಯ ಇಲಾಖೆಯಿಂದ ನಿರ್ಮಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಬೌರಿಂಗ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಉಸ್ತುವಾರಿಯನ್ನು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಎಂಜಿನಿಯರ್ಗಳು ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟಡಗಳು ಮತ್ತು ಕಾಂಪೌಂಡ್ಗಳ ಸುಸ್ಥಿರತೆ, ಸುಭದ್ರತೆ, ಸಾಮರ್ಥ್ಯ ಹಾಗೂ ನ್ಯೂನ್ಯತೆಯನ್ನು ಮೇಲ್ವಿಚಾರಣೆ ಮಾಡುವುದು ಎಂಜಿನಿಯರ್ಗಳ ಕರ್ತವ್ಯವಾಗಿದೆ. ಈ ಕರ್ತವ್ಯದಲ್ಲಿ ಲೋಪ ಎಸಗಿರುವುದು ಕಂಡುಬಂದಿರುವುದರಿಂದ ನಾಗರಾಜ್ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.