ಬೆಂಗಳೂರು: ಭಾರಿ ಮಳೆಯಿಂದ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.

ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಮಳೆಗೂ ಮುನ್ನ ಏನು ಕ್ರಮಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸಿಎಂ, ಹಳೆ ಗೋಡೆ ನೋಡೋಕಾಗಲ್ವಾ, ನಿಮ್ಮ ಮಧ್ಯೆ ಸಮನ್ವಯ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು ಎಂದು ತರಾಟೆ ತೆಗೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.