ಸೋಮವಾರ, ಡಿಸೆಂಬರ್ 16, 2019
17 °C

ಸಂಪ್‌ನಲ್ಲಿ ಬಿದ್ದು ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಏಳು ವರ್ಷದ ಬಾಲಕ ಭಾಸ್ಕರ್ ಎಂಬಾತ ಮೃತಪಟ್ಟಿದ್ದಾನೆ.

ಮೃತ ಬಾಲಕ, ಯಾದಗಿರಿಯ ಸಿದ್ದಪ್ಪ ಹಾಗೂ ಶಂಕ್ರಮ್ಮ ಎಂಬುವರ ಮಗ. ದಂಪತಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು.

‘ಗುರುವಾರ ಮಧ್ಯಾಹ್ನ ಸ್ನೇಹಿತರ ಜೊತೆ ಆಟವಾಡಲು ಹೋಗಿದ್ದ ಬಾಲಕ, ಮನೆಗೆ ವಾಪಸು ಬಂದಿರಲಿಲ್ಲ. ಗಾಬರಿಗೊಂಡ ಪೋಷಕರು, ಎಲ್ಲ ಕಡೆ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ. ಸಂಜೆ ಅನುಮಾನಗೊಂಡು ನೀರಿನ ಸಂಪಿನಲ್ಲಿ ನೋಡಿದಾಗ ಮೃತದೇಹ ಕಂಡಿತ್ತು’ ಎಂದು ಪೊಲೀಸರು ಹೇಳಿದರು.

ಮಾಲೀಕ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)